ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪಾರ್ಟ್ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ..!: ಆತ್ಮಹತ್ಯೆ ಶಂಕೆ!

ಅಪಾರ್ಟ್ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ..!: ಆತ್ಮಹತ್ಯೆ ಶಂಕೆ!

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್‌ನಲ್ಲಿ ಸಂಭವಿಸಿದೆ.

ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಮೃತಪಟ್ವವರೆಂದು ತಿಳಿದು ಬಂದಿದೆ.

ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ಉಣಿಸಿದ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ.

ಮೂಲತಃ ಹಾಸನ ಜಿಲ್ಲೆಯವರಾದ ಚೇತನ್ ಬೇರೆ ರಾಷ್ಟ್ರದಲ್ಲಿ ಕೆಲಸ ಮಾಡಲು ಇವರು ಕೆಲಸಗಾರರನ್ನು ನೇಮಕ ಮಾಡಿ ಕಳುಹಿಸುತ್ತಿದ್ದರು. ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ.

ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾನ್ಹವಿ ಮತ್ತು ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!