ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲಾರಿ - ಕಾರು ಮಧ್ಯೆ ಭೀಕರ ಅಪಘಾತ: ಪತಿ ಎದುರು ಸಾವನ್ನಪ್ಪಿದ ಪತ್ನಿ..!

ಲಾರಿ - ಕಾರು ಮಧ್ಯೆ ಭೀಕರ ಅಪಘಾತ: ಪತಿ ಎದುರು ಸಾವನ್ನಪ್ಪಿದ ಪತ್ನಿ..!

ಬೆಳಗಾವಿ: ಲಾರಿ - ಕಾರು ಮಧ್ಯೆ ಅಪಘಾತ ಸಂಭವಿಸಿ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.

ಮೂಡಲಗಿ ತಾಲೂಕಿನ ಸಂಗನಕೇರಿಯ ಡಾ.ಆಶಾ ಕೋಳಿ (32) ಹಾಗೂ ಪತಿ ಡಾ. ಭೀಮಪ್ಪ ಕೋಳಿ ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಮಹೇಶ ಖೋತ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!