ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭೀಕರ ಅಪಘಾತ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು!

ಭೀಕರ ಅಪಘಾತ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು!

ತಿರುಚ್ಚಿ: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬ ನಾಲ್ವರು ಸಾವನ್ನಪ್ಪಿದ್ದಾರೆ.

ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್‌ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಚಾಲಕ ಕೂಡ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!