ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದುಷ್ಕರ್ಮಿಗಳಿಂದ ಶಿಲುಬೆ ಧ್ವಂಸ: ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ದುಷ್ಕರ್ಮಿಗಳಿಂದ ಶಿಲುಬೆ ಧ್ವಂಸ: ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿರ್ವ: ಕಳೆದ 30 ವರ್ಷಗಳಿಂದ ಪೂಜೆ ಮಾಡಿಕೊಂಡು ಬರುತ್ತಿದ್ದ ಶಿಲುಬೆಯನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ಫೆ.19ರಂದು ಬೆಳಕಿಗೆ ಬಂದಿದೆ.

ಈ ಬಗ್ಗೆ ಫೆ. 21ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಘಟನೆ ನಡೆಯುವ 15 ದಿನಗಳ ಹಿಂದೆ ಇಲ್ಲಿ ಪೂಜೆ ಸಲ್ಲಿಸಲಾಗಿತ್ತು. ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ. ಫೆ.19 ರಂದು ಸ್ಥಳೀಯರು ಅಲ್ಲಿಗೆ ತೆರಳಿದಾಗ ದುಷ್ಕರ್ಮಿಗಳು ಶಿಲುಬೆಯನ್ನು ಮುರಿದು ಹಾನಿಗೊಳಿಸಿರುವುದು ಕಂಡುಬಂದಿದೆ.

ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!