ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೌರವ್ ಗಂಗುಲಿ ಕಾರು ಅಪಘಾತ!: ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

ಸೌರವ್ ಗಂಗುಲಿ ಕಾರು ಅಪಘಾತ!: ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

ಕೋಲ್ಕತಾ: ಭಾರತೀಯ ಕ್ರಿಕೆಟಿಗ ಸೌರವ್ ಗಂಗುಲಿ ಕಾರು ಅಪಘಾತಗೊಂಡ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರ  ಎಕ್ಸ್‌ಪ್ರೆಸ್‌ವೇಯಲ್ಲಿ ಫೆ.20ರಂದು ಸಂಭವಿಸಿದೆ.

ಬುರ್ದ್ವಾನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗಂಗುಲಿ ಕಾರಿನಲ್ಲಿ ತೆರಳುತ್ತಿದ್ದರು. ಅವರ ಕಾರಿನ ಎದುರಿದ್ದ ಲಾರಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ತಕ್ಷಣವೇ ಗಂಗುಲಿ ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಬ್ರೇಕ್ ಹಾಕುತ್ತಿದ್ದಾನೆ. ಅಪಘಾತವನ್ನು ತಪ್ಪಿಸಲು, ಗಂಗುಲಿ ಬೆಂಗಾವಲಿನಲ್ಲಿದ್ದ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ.

ಅದೃಷ್ಟವಶಾತ್, ಗಂಗುಲಿ ಅವರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!