ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದೆಹಲಿಯಲ್ಲಿ ಪ್ರಬಲ ಭೂಕಂಪ: ಬೆಚ್ಚಿ ಬಿದ್ದ ಜನ!: ಎಚ್ಚರದಿಂದಿರುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ

ದೆಹಲಿಯಲ್ಲಿ ಪ್ರಬಲ ಭೂಕಂಪ: ಬೆಚ್ಚಿ ಬಿದ್ದ ಜನ!: ಎಚ್ಚರದಿಂದಿರುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ

ಸಾಂದರ್ಭಿಕ ಚಿತ್ರ

ನವದೆಹಲಿ: ಎನ್‌ಸಿಆರ್‌ನಲ್ಲಿ ಇಂದು ಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಮಿಯ ಕಂಪನಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ.

ಬೆಳಗ್ಗೆ 5.36 ಸುಮಾರಿಗೆ ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.ಭೂಮಿಯ ಕಂಪನಕ್ಕೆ ಬೆದರಿದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಸದ್ಯ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಈ ನಡುವೆ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್ ಮಹಾವಿದ್ಯಾಲಯದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 5 ಕಿಲೋಮೀಟರ್ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!