ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾ ಕುಂಭಮೇಳಕ್ಕೆ ತೆರಳಿದ್ದ ವಾಹನ ಅಪಘಾತ: ಐವರು ಸ್ಥಳದಲ್ಲೇ ಸಾವು..!

ಮಹಾ ಕುಂಭಮೇಳಕ್ಕೆ ತೆರಳಿದ್ದ ವಾಹನ ಅಪಘಾತ: ಐವರು ಸ್ಥಳದಲ್ಲೇ ಸಾವು..!

ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯ ಬಳಿ ಸಂಭವಿಸಿದೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ (40 ವರ್ಷ), ನೀಲಮ್ಮ( 62 ವರ್ಷ) ಲಕ್ಷ್ಮಿ (57 ವರ್ಷ) ಕಲಾವತಿ (60 ವರ್ಷ) ಸಂತೋಷ (45 ವರ್ಷ) ಮೃತ ದುರ್ದೈವಿಗಳು.

ಬೀದರ್‌ನ ಲಾಡಗೆರಿ ನಗರ ನಿವಾಸಿಗಳಾದ 14 ಜನ ಫೆಬ್ರವರಿ 18 ರಂದು ಮಧ್ಯಾಹ್ನ ಬೀದರ ನಗರದಿಂದ ಕ್ರೂಸರ್ ಮಹಾಕುಂಭ ಪ್ರಯಾಗರಾಜಗೆ ಹೋಗಿದ್ದಾರೆ. ಶುಕ್ರವಾರ (ಫೆ.21) ಬೆಳಗಿನ ಜಾವ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!