ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು..!: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಘಟನೆ!

ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು..!: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಘಟನೆ!

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.

ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಮೃತರು ಕಾರಲ್ಲಿ ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ.

ಹನೂರು ಕಡೆಯಿಂದ ಬಂದ ಖಾಲಿ ಟಿಪ್ಪರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬಳಿಕ ಎರಡೂ ವಾಹನಗಳು ರಸ್ತೆ ಬದಿ ಪಲ್ಟಿಯಾಗಿವೆ.

ಮೃತರ ವಿವರವನ್ನು ಪೊಲೀಸರು ಕಲೆ ಹಾಕುತ್ತಿದ್ದು, ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!