ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆ:

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಪತ್ತೆ:

 

 

 

 

ಉಡುಪಿ:ನಾಪತ್ತೆಯಾಗಿದ್ದ  ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಸುಮಾರು 11 ದಿನಗಳ ಬಳಿಕ ಇಂದು ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದು , ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು.

ಈತ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯ ಬಳಿ ಪತ್ತೆಯಾಗಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!