ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ಲಾರಿಯಲ್ಲಿ ಅಕ್ರಮ ಮರ ಸಾಗಾಟ ಪತ್ತೆ: ಲಾರಿ ಸಹಿತ ಮರ ವಶಕ್ಕೆ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ:

ಬೆಳ್ತಂಗಡಿ, ಲಾರಿಯಲ್ಲಿ ಅಕ್ರಮ ಮರ ಸಾಗಾಟ ಪತ್ತೆ: ಲಾರಿ ಸಹಿತ ಮರ ವಶಕ್ಕೆ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ:

 

 

 

ಬೆಳ್ತಂಗಡಿ : ವಿವಿಧ ಜಾತಿಯ ಮರಗಳನ್ನು ಅನುಮತಿ ಇಲ್ಲದೇ ಅಕ್ರಮವಾಗಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಲಾರಿ ಸಹಿತ ಮರ ವಶಕ್ಕೆ ಪಡೆದುಕೊಂಡಿದ್ದಾರೆ.

ಕಿಲ್ಲೂರು ಕಡೆಯಿಂದ ಮುಖ್ಯ ರಸ್ತೆಯಲ್ಲಿ ಬೆಳ್ತಂಗಡಿಯತ್ತ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಅಶೋಕ್ ಲೈಲಾಂಡ್ ಕಂಪನಿಯ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ(FMS) ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿದ್ದು ತಕ್ಷಣ ಕಾರ್ಯಾಚರಣೆಗಿಳಿದ ತಂಡ ಮಾ.6 ರಂದು ರಾತ್ರಿ ಸುಮಾರು 8:45 ಕ್ಕೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ರಸ್ತೆಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡಿರುವುದು ಪತ್ತೆಯಾಗಿದೆ.

ಲಾರಿ ಮತ್ತು ಮರಗಳನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ದಾಸ್ತಾನು ಕಚೇರಿಗೆ ತಂದು ಮಾ.7 ರಂದು ಮಹಜರು ನಡೆಸಿದಾಗ ಲಾರಿಯಲ್ಲಿ ವಿವಿಧ ಜಾತಿಯ 11.270 ಘನ ಮೀಟರ್ ಮರ ಪತ್ತೆಯಾಗಿದ್ದು. ಲಾರಿ ಮತ್ತು ಮರದ ಮೌಲ್ಯ ಸುಮಾರು 15 ಲಕ್ಷವಾಗಿದೆ. ಲಾರಿ ಚಾಲಕ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ನಿವಾಸಿ ಮೊಹಮ್ಮದ್ ಅವರ ಮಗ ಸಿದ್ದಿಕ್ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಮಂಗಳೂರು ಅರಣ್ಯ ಸಂಚಾರಿ ದಳದ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೂಜಾರಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಸಿದ್ದಿಕ್ ಗೆ ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ವಿಭಾಗೀಯ ಅರಣ್ಯ ಅಧಿಕಾರಿ(DFO) ಶ್ರೀಕಾಂತ ಖಣದಾಳಿ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೂಜಾರಿ, ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಮತ್ತು ವಿನಯ ಕುಮಾರ್, ವಾಹನ ಚಾಲಕ ಜಯಪ್ರಕಾಶ್ ಹಾಗೂ ಬೆಳ್ತಂಗಡಿ ವಲಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ರವೀಂದ್ರ ನಾಯ್ಕ್, ಗಸ್ತು ವನಪಾಲಕ ಪರಶುರಾಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!