ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಂಡಿಂಜೆ ಬೈಕ್ ಅಪಘಾತ, ಯುವ ಭಾಗವತ ಸ್ಥಳದಲ್ಲೇ ಸಾವು:

ಅಂಡಿಂಜೆ ಬೈಕ್ ಅಪಘಾತ, ಯುವ ಭಾಗವತ ಸ್ಥಳದಲ್ಲೇ ಸಾವು:

 

 

 

ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ದಿ| ಅಣ್ಣಿ ಆಚಾರ್ಯ ಪುತ್ರ,ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ (40) ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ , ಹಿಂದಿರುಗುತ್ತಿದ್ದ ವೇಳೆ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ.

 

 

ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸತೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ. ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!