ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ, .ಪದ್ಮನಾಭ ಮಾಣಿಂಜ ನಿಧನ:

ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ, .ಪದ್ಮನಾಭ ಮಾಣಿಂಜ ನಿಧನ:

 

 

 

ಬೆಳ್ತಂಗಡಿ: ಗುರುದೇವ ವಿವಿಧೋದ್ದೇಶ  ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಅಲ್ಪ ಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ನಿಧನ ಹೊಂದಿದ್ದಾರೆ.

ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯ ತಲೆ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಮಾಜಿ ಶಾಸಕ ಕೆ.ವಸಂತ ಬಂಗೇರರೊಂದಿಗೆ ಉತ್ತಮ ಸಂಬಂಧ ಹೊಂದಿದ ಇವರು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸಿದ್ದರು.ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಪ್ರಗತಿಯ ಹಿಂದೆ ಪದ್ಮನಾಭ ಮಾಣಿಂಜರವರ ದೂರದೃಷ್ಟಿ ಚಿಂತನೆ ಮಹತ್ತರವಾದದು.

ಸರಳ, ನೇರ ನಿಷ್ಟುರವಾದಿ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪತ್ನಿ ಇಂದಿರಾ, ಪುತ್ರರಾದ ಸೂರಜ್, ಸುಧೀರ್, ಸುಜಿತ್, ಸೊಸೆಯಂದಿರಾದ ಸ್ನೇಹ, ಟೀನಾ, ದಿವ್ಯ ಮತ್ತು ಮೊಮ್ಮಕ್ಕಳು , ಕುಟುಂಬಸ್ಥರನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!