ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗೆಲ್ಲು ಕಡಿಯುವ ವೇಳೆ ವಿದ್ಯುತ್ ತಂತಿಗೆ ಬಿದ್ದು ಶಾಕ್: ಮರದಿಂದ ಆಯ ತಪ್ಪಿ ಬಿದ್ದು ವ್ಯಕ್ತಿ ಸಾವು: ಬೆಳ್ತಂಗಡಿಯ ಹುಣ್ಸೆಕಟ್ಟೆ ಎಂಬಲ್ಲಿ ಘಟನೆ:

ಗೆಲ್ಲು ಕಡಿಯುವ ವೇಳೆ ವಿದ್ಯುತ್ ತಂತಿಗೆ ಬಿದ್ದು ಶಾಕ್: ಮರದಿಂದ ಆಯ ತಪ್ಪಿ ಬಿದ್ದು ವ್ಯಕ್ತಿ ಸಾವು: ಬೆಳ್ತಂಗಡಿಯ ಹುಣ್ಸೆಕಟ್ಟೆ ಎಂಬಲ್ಲಿ ಘಟನೆ:

 

 

ಬೆಳ್ತಂಗಡಿ: ಮರವೊಂದರ ಗೆಲ್ಲು ತುಂಡರಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಗುರುವಾರ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹುಣ್ಸೆಕಟ್ಟೆಯ ಪುಂಡಿಕ್ಕು ಎಂಬಲ್ಲಿ ನಡೆದಿದೆ.

 

 

 

 

ಪುಂಡಿಕ್ಕು ಎಂಬಲ್ಲಿ ಚನನ ಗೌಡ (69ವ) ಎಂಬವರು ಇಂದು ಬೆಳಿಗ್ಗೆ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಅವರು ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಕರೆದುಕೊಂಡು ಹೋಗುವ ವೇಳೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!