ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಂಜಾಬಿನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಮತ್ತಷ್ಟು ತಿರುವು: ಸಿ ಸಿ ಕ್ಯಾಮಾರ ದೃಶ್ಯಾವಳಿ ತೋರಿಸಲು ಪೊಲೀಸರ ಹಿಂದೇಟು..! ಪೊಲೀಸರಿಂದ ಮೋಸ ,,ಪೋಷಕರ ಆರೋಪ:

ಪಂಜಾಬಿನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಮತ್ತಷ್ಟು ತಿರುವು: ಸಿ ಸಿ ಕ್ಯಾಮಾರ ದೃಶ್ಯಾವಳಿ ತೋರಿಸಲು ಪೊಲೀಸರ ಹಿಂದೇಟು..! ಪೊಲೀಸರಿಂದ ಮೋಸ ,,ಪೋಷಕರ ಆರೋಪ:

 

 

 

ಬೆಳ್ತಂಗಡಿ; ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್ ಆರೋಪಿಸಿದ್ದಾರೆ. ಆಕಾಂಕ್ಷ ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಹೋಗಿದ್ದ ತಂದೆ ಹಾಗು ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಸಹಜ ಸಾವಿನ ಬಗ್ಗೆ ಅನುಮಾನವಿದ್ದು ಸಮಗ್ರ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು. ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆರ್ ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ ಪಂಜಾಬಿ ಭಾಷೆಯಲ್ಲಿದ್ದ ಈ ಎಫ್.ಐ.ಆರ್ ವರದಿಯನ್ನು ಸ್ಥಳೀಯರ ಸಹಕಾರದಿಂದ ಓದಿ ತಿಳಿದಕೊಂಡಾಗ ಅದರಲ್ಲಿ ತನ್ನ ಮಗಳ ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಖಿನ್ನತೆಗೆ ಒಳಗಾಗಿ ಆಕೆ‌ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದಾಖಲಿಸಿರುವುದು ತಿಳಿದು ಬಂದಿದೆ.

 

 

 

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮನೆಯವರು ಇದನ್ನು ಒಪ್ಪಲು ಸಾಧ್ಯವಿಲ್ಲ. ನಾವು ನೀಡಿರುವ ದೂರಿನಂತೆಯೇ ಪ್ರಕರಣ‌ ದಾಖಲಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಇದಾದ ಬಳಿಕ ಇದೀಗ ಮತ್ತೆ ಮೃತಳ ತಂದೆ ಸುರೇಂದ್ರ ಅವರಿಂದ ಮತ್ತೊಂದು ದೂರನ್ನು ಪಡೆದುಕೊಂಡಿದ್ದಾರೆ. ಈ ದೂರಿನಲ್ಲಿ ತಮಗೆ ಮಗಳ ಸಾವಿಗೆ ಸಂಸ್ಥೆಯಲ್ಲಿ ಪ್ರಾಧ್ಯಾಪಕನಾಗಿರುವ ಮ್ಯಾಥ್ಯೂ ಕಾರಣನಾಗಿದ್ದಾನೆ ಎಂದು ತಿಳಿಸಿದ್ದಾರೆ. ಆಕೆಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಇದೀಗ ಆಕಾಂಕ್ಷ ತಂದೆ ತಿಳಿಸುವ ಮಾಹಿತಿಯಂತೆ ಕಾಲೇಜಿನ ಸಿ.ಸಿ ಕ್ಯಾಮರಾ ಪುಟೇಜ್ ಗಳನ್ನು ಸರಿಯಾಗಿ ನೀಡುತ್ತಿಲ್ಲ. ಕೇವಲ ಆಕೆ‌ ಕೆಳಗೆ ಬೀಳುವ ದೃಶ್ಯಗಳನ್ನು ಮಾತ್ರ ತೋರಿಸಲಾಗುತ್ತಿದೆ. ಆಕೆ ಹೇಗೆ ಕೆಳಗೆ ಬಿದ್ದಳು ಯಾರಾದರೂ ದೂಡಿರುವುದಾ ಅಥವಾ ಆಕೆ ಹಾರಿದ್ದಳಾ ಎಂದು ಎಲ್ಲಿಯೂ ಕಾಣಿಸುತ್ತಿಲ್ಲ. ಸಿ.ಸಿ.ಕ್ಯಾಮರದ ಪೂರ್ಣ ದಾಖಲೆಗಳನ್ನು ತೋರಿಸುವಂತೆ ಕೇಳಿದರೆ ಅದನ್ನು ನೀಡಲು ಸಿದ್ದರಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಆರಂಭದಲ್ಲಿ ತನಿಖೆಯ ಭರವಸೆ ನೀಡಿದ್ದ ಪೊಲೀಸರು ಇದೀಗ ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿರುವುದಾಗಿ ತಿಳಿಸಿದ ಅವರು ಇದೀಗ ಎರಡನೇ ಬಾರಿಗೆ ದೂರನ್ನು ಪೊಲೀಸರು ಸ್ವೀಕರಿಸಿದ್ದು ಯಾವರೀತಿ ಪ್ರಕರಣ ದಾಖಲಿಸುತ್ತಾರೆ ಎಂದು ಕಾದು ನೋಡವೇಕಾಗಿದೆ.

ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ; ಪ್ರಕರಣ ದಾಖಲಿಸುವ ಬಗ್ಗೆ ಇರುವ ಗೊಂದಲದಿಂದಾಗಿ ಇನ್ನೂ ಮರಣೋತ್ತರ ಪರೀಕ್ಷೆ ನಡೆದಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!