ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ:ಚಂಡ ಮಾರುತದ ಭೀತಿ,ರೆಡ್ ಅಲರ್ಟ್ ಘೋಷಣೆ: ತಾಲೂಕಿನಾದ್ಯಂತ ಸುರಿಯುತ್ತಿದೆ ಭಾರೀ ಮಳೆ:ನದಿಗಳಲ್ಲಿ ನೀರಿನ ಹರಿವು ಹೆಚ್ಚಳ:

ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ:ಚಂಡ ಮಾರುತದ ಭೀತಿ,ರೆಡ್ ಅಲರ್ಟ್ ಘೋಷಣೆ: ತಾಲೂಕಿನಾದ್ಯಂತ ಸುರಿಯುತ್ತಿದೆ ಭಾರೀ ಮಳೆ:ನದಿಗಳಲ್ಲಿ ನೀರಿನ ಹರಿವು ಹೆಚ್ಚಳ:

 

 

 

ಬೆಳ್ತಂಗಡಿ: ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಚಂಡ ಮಾರುತದ ಭೀತಿ ಎದುರಾಗಿದೆ.ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 28 ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 45 ರಿಂದ 55 ಕಿ ಮೀ ವೇಗದಲ್ಲಿ ಗಾಳಿ ಬೀಸುವ ಸಂಭವ ಇರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತಿದ್ದು ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!