ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರಿನಲ್ಲಿ , ತಂದೆಯ ನಿರ್ಲಕ್ಷ್ಯಕ್ಕೆ 10 ತಿಂಗಳ ಮಗು ಬಲಿ: ಸೇದಿ ಎಸೆದ ಬೀಡಿಯ ತುಂಡು ನುಂಗಿ ಮಗು ಸಾವು:

ಮಂಗಳೂರಿನಲ್ಲಿ , ತಂದೆಯ ನಿರ್ಲಕ್ಷ್ಯಕ್ಕೆ 10 ತಿಂಗಳ ಮಗು ಬಲಿ: ಸೇದಿ ಎಸೆದ ಬೀಡಿಯ ತುಂಡು ನುಂಗಿ ಮಗು ಸಾವು:

 

ಸಾಂಧರ್ಬಿಕ ಚಿತ್ರ

ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟ ಘಟನೆ ಮಂಗಳೂರು ಸಮೀಪ ನಡೆದಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ‌ ಮಗು ಅನೀಶ್ ಕುಮಾರ್ ಮೃತಪಟ್ಟಿದೆ.

ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಮಗುವನ್ನು 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ, ಭಾನುವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಮಗುವಿನ ತಾಯಿ ಲಕ್ಷ್ಮೀದೇವಿ ಪ್ರತಿಕ್ರಿಯಿಸಿ, ''ನನ್ನ ಗಂಡನ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಹಲವು ಬಾರಿ ತಿಳಿಸಿದರೂ ಅವರು ಗಮನ ಕೊಡಲಿಲ್ಲ. ಈಗ ಮಗುವಿನ ಪ್ರಾಣವೇ ಹೋಗಿದೆ'' ಎಂದು ಬೇಸರ ತೋಡಿಕೊಂಡರು.

ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!