ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆಯಲ್ಲಿ ಉಲಾಯಿ ಪಿದಾಯಿ ಜೂಜಾಟ: 9 ಮಂದಿಯ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು:

ಗುರುವಾಯನಕೆರೆಯಲ್ಲಿ ಉಲಾಯಿ ಪಿದಾಯಿ ಜೂಜಾಟ: 9 ಮಂದಿಯ ವಿರುದ್ಧ ಕೇಸ್ ದಾಖಲಿಸಿದ ಪೊಲೀಸರು:

 

 

 

ಬೆಳ್ತಂಗಡಿ : ಗುರುವಾಯನಕೆರೆ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಪಣೆಜಾಲ್ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಗೆ ಜೂ.17 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ಮತ್ತು ಸಿಬ್ಬಂದಿಗಳು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಆಟಕ್ಕೆ ಬಳಸುವ ಕಾರ್ಡ್ಸ್ , 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ, ₹ 26,778 ನಗದು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!