ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಿಲ್ಲೆಯಾದ್ಯಂತ ಭಾರೀ ಮಳೆ ಸಂಭವ, ಆರೆಂಜ್ ಅಲರ್ಟ್: ಶಾಲೆಗಳಿಗೆ ರಜೆ ಘೋಷಣೆ:

ಜಿಲ್ಲೆಯಾದ್ಯಂತ ಭಾರೀ ಮಳೆ ಸಂಭವ, ಆರೆಂಜ್ ಅಲರ್ಟ್: ಶಾಲೆಗಳಿಗೆ ರಜೆ ಘೋಷಣೆ:

 

 

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ  ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್  ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರಗಳಿಂದ ಮಳೆ ಕಡಿಮೆಯಾಗಿ ಬಿಸಿಲಿನ ತಾಪ ಹೆಚ್ಚಾಗಿದ್ದು,  ಮುಂದಿನ ಐದು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಂಭವ ಇರುವುದರಿಂದ ಕೆಲವು ಕಡೆ  ರೆಡ್ ಹಾಗೂ ಆರೆಂಜ್  ಅಲರ್ಟ್ ಘೋಷಣೆ ಮಾಡಲಾಗಿದೆ.‌ಈಗಾಗಲೇ ದ.ಕ. ಜಿಲ್ಲೆಯ ಬೆಳ್ತಂಗಡಿ ಸೇರಿದಂತೆ ಇತರ ತಾಲೂಕುಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಅಪಾಯಕಾರಿ ಮನೆಗಳು ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನದಿ ನೀರು ನುಗ್ಗುವ ಮನೆಗಳಿಗೆ ಎಚ್ಚರಿಕೆಯ ನೋಟೀಸ್ ನೀಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಇಂದು ಜೂನ್ 12 ಭಾರೀ ಮಳೆಯಾಗುವ ಸಂಭವ ಇರುವುದರಿಂದ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ನೀಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!