ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಳೆ ಬೆಳ್ತಂಗಡಿಯಲ್ಲಿ ಲೋಕಾಯುಕ್ತ "ಜನ ಸಂಪರ್ಕ ಸಭೆ": ಅಧಿಕಾರಿಗಳು, ಸೇರಿದಂತೆ ವಿವಿಧ ಸಮಸ್ಯೆಗಳ ದೂರು ನೀಡಲು ಅವಕಾಶ:

ನಾಳೆ ಬೆಳ್ತಂಗಡಿಯಲ್ಲಿ ಲೋಕಾಯುಕ್ತ "ಜನ ಸಂಪರ್ಕ ಸಭೆ": ಅಧಿಕಾರಿಗಳು, ಸೇರಿದಂತೆ ವಿವಿಧ ಸಮಸ್ಯೆಗಳ ದೂರು ನೀಡಲು ಅವಕಾಶ:

 

 

ಬೆಳ್ತಂಗಡಿ: ತಾಲೂಕು ಕಛೇರಿಯಲ್ಲಿ ನಾಳೆ ಜೂನ್ 16 ಸೋಮವಾರ ಬೆಳಿಗ್ಗೆ 11 ಗಂಟೆಯಿಂದ “ಲೋಕಾಯುಕ್ತ ಜನ ಸಂಪರ್ಕ ಸಭೆ" ನಡೆಯಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು. ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಈ ಸಭೆಯಲ್ಲಿ ಉಪಸ್ಥಿರಿದ್ದು, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಆಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!