ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸವಣಾಲು, ನದಿಯಲ್ಲಿ ಕೊಚ್ಚಿ ಹೋದ ಬೈಕ್ : ಸವಾರರಿಬ್ಬರು ‌ ಪವಾಡ ಸದೃಶ ಪಾರು:

ಸವಣಾಲು, ನದಿಯಲ್ಲಿ ಕೊಚ್ಚಿ ಹೋದ ಬೈಕ್ : ಸವಾರರಿಬ್ಬರು ‌ ಪವಾಡ ಸದೃಶ ಪಾರು:

 

 

 

ಬೆಳ್ತಂಗಡಿ; ತಾಲೂಕಿನ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!