ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿ.ಸಿ. ರೋಡ್ , ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ: ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ  ಸಾವು:

ಬಿ.ಸಿ. ರೋಡ್ , ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ: ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ  ಸಾವು:

 

 

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ. ರೋಡ್ ಸಮೀಪದ ಅಜ್ಜಿ ಬೆಟ್ಟು ಎಂಬಲ್ಲಿ ಸೋಮವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಎಂದು ಗುರುತಿಸಲಾಗಿದೆ.

 

 

 

ದ್ವಿಚಕ್ರ ಸವಾರ ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಎಂಬಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ‌ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಚಿದಾನಂದ ಅವರು ಬಂಟ್ವಾಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!