ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ , ಆಟೋ ರಿಕ್ಷಾ ಮೇಲೆ ಆನೆ ದಾಳಿ:, ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ:

ಧರ್ಮಸ್ಥಳ , ಆಟೋ ರಿಕ್ಷಾ ಮೇಲೆ ಆನೆ ದಾಳಿ:, ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ:

 

 

 

ಬೆಳ್ತಂಗಡಿ : ಕಾಡು ಆನೆಯೊಂದು ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿದ ಘಟನೆ ಧರ್ಮಸ್ಥಳ ಗ್ರಾಮದ ಬೋಳಿಯಾರ್ ಎಂಬಲ್ಲಿ ಜೂನ್ 06 ರಂದು ಬೆಳಿಗ್ಗೆ ಸಂಭವಿಸಿದೆ.

ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ ಈ ವೇಳೆ ಕಾಡಾನೆ ರಿಕ್ಷಾದ ಮೇಲೆ ದಾಳಿ ನಡೆಸಿತ್ತಲ್ಲದೇ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದೆ.. ರಿಕ್ಷಾವನ್ನು ಹುಡಿ ಮಾಡುತ್ತಿರುವ ಶಬ್ಧ ದಿನೇಶ್ ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದಾಗ ಕಾಡಾನೆಗಳು ಅರಣ್ಯದತ್ತ ಹೋಗಿದೆ ರಿಕ್ಷಾದ ಸ್ಥಿತಿ ನೋಡಿ ಕುಸಿದು ಬಿದ್ದ ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ್ದಾರೆ . ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!