ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ:ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು:

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ:ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು:

 

 

ಬಂಟ್ವಾಳ:ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್​ಎಸ್​ಎಸ್​ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 12ರಂದು ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ 17 ದಿನಗಳ ಬಳಿಕ ಎಫ್​ಐಆರ್​​ ದಾಖಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆಯು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ನಡೆದಿತ್ತು.

ಶ್ರದ್ಧಾಂಜಲಿ ಸಭೆಯಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರು ಭಾಗವಹಿಸಿದ್ದರು. ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ಥ್ಯ ಕೆಡುವಂತೆ ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಅವರು ಹೇಳಿಕೆ ನೀಡಿದ್ದಾರೆ. ಇದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಈ ಬಗ್ಗೆ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 353(2) ಬಿಎನ್​ಎಸ್​ ಪ್ರಕಾರ ಪ್ರಕರಣ ದಾಖಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಎಂ ನಿರ್ದೇಶನದ ಬೆನ್ನಲ್ಲೇ ಕೇಸ್​: ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚನೆ‌‌ ನೀಡಲಾಗಿದ್ದು, ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮೇ 31 ರಂದು ತಿಳಿಸಿದ್ದರು.

 

 

 

ಶನಿವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆಗಿನ ಎರಡು ದಿನಗಳ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾಧ್ಯಮಗೋಷ್ಟಿ ನಡೆಸಿದ್ದ ಅವರು, ದ್ವೇಷ ಭಾಷಣ ಸಂಬಂಧ ಕಾನೂನು ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದ್ದರು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!