ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ, ನಿಯಂತ್ರಣ ತಪ್ಪಿ ಚರಂಡಿ ಬಿದ್ದ ಬೊಲೆರೋ ವಾಹನ:

ಚಾರ್ಮಾಡಿ, ನಿಯಂತ್ರಣ ತಪ್ಪಿ ಚರಂಡಿ ಬಿದ್ದ ಬೊಲೆರೋ ವಾಹನ:

 

 

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ 9:30 ಸುಮಾರಿಗೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳದ ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರುವ ವೇಳೆ ಚಾರ್ಮಾಡಿಯ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದಿದ್ದು ಅದನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಆಗುತಿದ್ದ ಕಾಂಕ್ರಿಟ್ ಚರಂಡಿಗೆ ಬಿದಿದೆ . ಅದೃಷ್ಟವಶಾತ್ ವಾಹನದಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಸ್ಥಳೀಯ ಯುವಕರ ತಂಡದ ಸಹಕಾರದಲ್ಲಿ ವಾಹನವನ್ನು ಹೊರತೆಗೆಯಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!