ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ವಿಶೇಷ ತನಿಖಾ ತಂಡ (ಎಸ್ಐಟಿ).ಸತ್ಯಾಂಶ ಬಹಿರಂಗ ಪಡಿಸಲಿ, ಪಾರ್ಶ್ವನಾಥ್ ಜೈನ್:

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ವಿಶೇಷ ತನಿಖಾ ತಂಡ (ಎಸ್ಐಟಿ).ಸತ್ಯಾಂಶ ಬಹಿರಂಗ ಪಡಿಸಲಿ, ಪಾರ್ಶ್ವನಾಥ್ ಜೈನ್:

 

 

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ "ಹಲವಾರು ಶವಗಳನ್ನು ಹೂತಿದ್ದೆ" ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ "ಸತ್ಯ" ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು ಹೇಳಿಕೆ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!