ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವೃತ್ತಿಯಲ್ಲಿ ಶಿಸ್ತು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ, ವೀರು ಶೆಟ್ಟಿ, ಧರ್ಮಸ್ಥಳ

ವೃತ್ತಿಯಲ್ಲಿ ಶಿಸ್ತು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ, ವೀರು ಶೆಟ್ಟಿ, ಧರ್ಮಸ್ಥಳ

 

 

 

 

ಬೆಳ್ತಂಗಡಿ : ಜೀವನದಲ್ಲಿ ನಿರೀಕ್ಷೆಗಳನ್ನು ಕಡಿಮೆ ಇಟ್ಟುಕೊಂಡಷ್ಟು ಬದುಕು ಸುಲಭವಾಗುತ್ತದೆ. ನೀರಲ್ಲಾದರೂ ಹಾಕು, ಹಾಲಲ್ಲಾದರೂ ಹಾಕು ಎನ್ನುವ ಹಾಗೇ ನೀರಲ್ಲಿ ಮೀನಿನ ರೀತಿ  ಹಾಲಿನಲ್ಲಿ ಕೆನೆಯವರೀತಿ  ಬದುಕಿ ಇದೇ  ನಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ಮೆನ್ಸ್ ಪಾರ್ಲರ್‌ ಸೆಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಇಂದು ಪುರುಷ-ಮಹಿಳೆಯರು ಸಮಾನವಾಗಿ ವೃತ್ತಿಯನ್ನು ನಡೆಸುತ್ತಿದ್ದಾರೆ. ಕಲಿಕೆ ಅನ್ನುವುದು ನಿರಂತರವಾಗಿ ಇರುವುದು ಅದನ್ನು ನಾವು ಅನುಸರಿಸಬೇಕು. ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ ಪ್ರತಿಯೊಬ್ಬರು ವೃತ್ತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ ಯಶಸ್ಸು ಕಾಣಬಹುದು ಜೊತೆಗೆ ಬಹುಮುಖ್ಯವಾಗಿ ದುರಭ್ಯಾಸಗಳಿಂದ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಆಳವಡಿಸಿಕೊಂಡು ವೃತ್ತಿಯಲ್ಲಿ ಮುನ್ನಡೆಯಿರಿ. ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರುಡ್‌ ಸೆಟ್‌ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ಉಚಿತ ತರಬೇತಿ ನೀಡಿ ಯುವಜನರಿಗೆ ಅನುಕೂಲ ಮಾಡಿದ್ದಾರೆ. ಇದು ಪ್ರಪಂಚಕ್ಕೆ ಮಾದರಿಯಾಗಿದೆ. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕ, ಲೋಕೇಶ್ ಮತ್ತು ರವಿ ಕುಮಾರ್‌ ಕಡೂರು, ಉಪಸ್ಥಿತರಿದ್ದರು

ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ್ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ. ಉಪನ್ಯಾಸಕ ಕೆ.ಕರುಣಾಕರ ಜೈನ್* ವಂದಿಸಿದರು. ಸುಮಾರು 35 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಶಿಬಿರಾರ್ಥಿಗಳ ಪರವಾಗಿ ಮಂಜುನಾಥ, ಪ್ರಜ್ವಲ್, ರಕ್ಷಿತ್ ತರಬೇತಿಯ ಅನುಭವ ಹಂಚಿಕೊಂಡರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!