ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತಿಮರೋಡಿ ಮಹೇಶ್ ಶೆಟ್ಟಿ ಗಡೀಪಾರು ಆದೇಶ ಪ್ರಕರಣ: ಪ್ರತಿಭಟನೆಗೆ ಮುಂದಾದವರಿಗೆ ಅನುಮತಿ ನಿರಾಕರಿಸಿದ ತಹಶೀಲ್ದಾರ್:

ತಿಮರೋಡಿ ಮಹೇಶ್ ಶೆಟ್ಟಿ ಗಡೀಪಾರು ಆದೇಶ ಪ್ರಕರಣ: ಪ್ರತಿಭಟನೆಗೆ ಮುಂದಾದವರಿಗೆ ಅನುಮತಿ ನಿರಾಕರಿಸಿದ ತಹಶೀಲ್ದಾರ್:

 

ಬೆಳ್ತಂಗಡಿ : ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ತಿಮರೋಡಿ ಬೆಂಬಗರಿಂದ ಪ್ರತಿಭಟನೆಗೆ ಅನುಮತಿಯನ್ನು ಬೆಳ್ತಂಗಡಿ ತಹಶೀಲ್ದಾರ್ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.

ಈ ಗಡಿಪಾರು ಆದೇಶದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಸೆ.25 ರಂದು ಬೆಳ್ತಂಗಡಿ ತಹಶೀಲ್ದಾರ್ ಗೆ ಸೆ.29 ರಂದು ಬೆಳ್ತಂಗಡಿ ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಬೆಳ್ತಂಗಡಿ ಪೊಲೀಸರು ಪ್ರತಿಭಟನೆ ಅರ್ಜಿ ಪರಿಶೀಲನೆ ಮಾಡಿ ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಆಗುವ ಸಂಭವ ಇರುವುದಾಗಿ ತಿಳಿಸಿ ಅನುಮತಿ ನೀಡದಂತೆ ಅಭಿಪ್ರಾಯ ನೀಡಿದ ಮೇರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೆ.26 ರಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!