ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜಯಂತ್ ಟಿ‌. ಮಗ ಹಾಗೂ 5 ಮಂದಿ ಯೂಟ್ಯೂಬರ್ ಗಳಿಗೆ ಎಸ್ಐಟಿ ನೋಟೀಸ್:

ಜಯಂತ್ ಟಿ‌. ಮಗ ಹಾಗೂ 5 ಮಂದಿ ಯೂಟ್ಯೂಬರ್ ಗಳಿಗೆ ಎಸ್ಐಟಿ ನೋಟೀಸ್:

 

 

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಐದು ಮಂದಿ ಯೂಟ್ಯೂಬರ್ ಹಾಗೂ ಜಯಂತ್  ಟಿ ಮಗನಿಗೆ  ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಯೂಟ್ಯೂಬರ್ ಗಳಾದ ಡಿ ಟಾಸ್ಕ್ ಯೂಟ್ಯೂಬರ್ ದಿನೇಶ್, ದೂತ ಯೂಟ್ಯೂಬರ್ ಸಮೀರ್.ಎಮ್.ಡಿ , ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ,ಕುಡ್ಲ ರಾಂಪೇಜ್ ಯೂಟ್ಯೂಬರ್ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಸೇರಿ ಒಟ್ಟು ಆರು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೋರಾಟಗಾರ ಜಯಂತ್.ಟಿ ಮಗ ಜೀವನ್ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ವಿಡಿಯೋ ಮಾಡಿದ ಪ್ರಕರಣಕ್ಕೆ ವಿಚಾರಣೆ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!