ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನೆರಿಯ, ಮನೆಯಲ್ಲಿ ಬೆಂಕಿ ಅನಾಹುತ, ಅಪಾರ ಹಾನಿ:ಆರ್ಥಿಕ ಸಹಕಾರ ನೀಡಿದ ಕಿರಣ್ ಚಂದ್ರ ಪುಷ್ಪಗಿರಿ:

ನೆರಿಯ, ಮನೆಯಲ್ಲಿ ಬೆಂಕಿ ಅನಾಹುತ, ಅಪಾರ ಹಾನಿ:ಆರ್ಥಿಕ ಸಹಕಾರ ನೀಡಿದ ಕಿರಣ್ ಚಂದ್ರ ಪುಷ್ಪಗಿರಿ:

 

ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಹರೀಶ್ ಎಂಬವರ ಮನೆಯಲ್ಲಿ ವೇಳೆ ಬೆಂಕಿ ಅನಾಹುತ ಉಂಟಾಗಿ ಮನೆಗೆ ಭಾರಿ ಹಾನಿಯಾದ ಘಟನೆ ಸೋಮವಾರ ರಾತ್ರಿಯ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಬಳಿಕ ರಾತ್ರಿಯ ಆಗುತ್ತಿದ್ದ ಅಂತೆಯೇ ಬೆಂಕಿ ಅನಾಹುತ ಉಂಟಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಹಂಚಿನ ಮೇಲ್ಛಾವಣಿಯ ಮನೆ ಬಹುತೇಕ ಬೆಂಕಿಗೆ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!