ಪುಂಜಾಲಕಟ್ಟೆ: ಸ್ಕೂಟರ್, ಕಾರು ಢಿಕ್ಕಿ, ಒಂದು ಸಾವು ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21)ಮೃತಪಟ್ಟವರು. ಸ್ಕೂಟರ್ ನ ಇನ್ನೋರ್ವ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸಗೆ ದಾಖಲಿಸಲಾಗಿದೆ. ಇಬ್ಬರೂ ಮಂಗಳೂರು ಸಹ್ಯಾದ್ರಿ ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ. ಬಂಟ್ವಾಳ- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಳಕಟ್ಟೆ ಯಿಂದ ಎನ್.ಸಿ.ರೋಡ್ ಗೆ ಸಾಗುವ ದಾರಿಯಲ್ಲಿ ತಿರುವೊಂದಿದ್ದು, ತೀರಾ ಆಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಇಲ್ಲಿ ಸಂಭವಿಸಿವೆ. ಇಬ್ಬರೂ ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಈ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾಆಕ್ಟೀವ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.