ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ:, ವೇಣೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು:

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ:, ವೇಣೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು:

 

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ನೊಂದ ಬಾಲಕಿ ವೇಣೂರು ಠಾಣಾ ವ್ಯಾಪ್ತಿ ಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿರುವ ವೇಳೆ ಅಲ್ಲಿದ್ದ ನೊಂದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ ಇದಾದ ಬಳಿಕ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ.

ಬಾಲಕಿ ಅನಾರೋಗ್ಯದ ಕಾರಣ ವೇಣೂರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿ ಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಆರೋಪಿ ಅಮ್ಜತ್ ಖಾನ್ (18ವ) ವಿರುದ್ದ ವೇಣೂರು ಠಾಣೆಯಲ್ಲಿ ನ.25 ರಂದು ಪ್ರಕರಣ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!