ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುತ್ರೊಟ್ಟು ಬಳಿ‌ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಓರ್ವ ಬಾಲಕ ಸಾವು ; ಹಲವು ಮಂದಿಗೆ ಗಾಯ

ಕುತ್ರೊಟ್ಟು ಬಳಿ‌ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಓರ್ವ ಬಾಲಕ ಸಾವು ; ಹಲವು ಮಂದಿಗೆ ಗಾಯ

 

 

 

 

 

 

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು.ಹಲವರು ಗಾಯಗೊಂಡ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು - ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ.

ರಿಕ್ಷಾದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದ್ದು,.ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!