ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹುಣಸೂರು,ಆಭರಣ ಮಳಿಗೆಗೆ ನುಗ್ಗಿದ ಡಕಾಯಿತರು: ಗುಂಡಿನ‌ ದಾಳಿ ನಡೆಸಿ ಅಂದಾಜು ₹ 5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ:

ಹುಣಸೂರು,ಆಭರಣ ಮಳಿಗೆಗೆ ನುಗ್ಗಿದ ಡಕಾಯಿತರು: ಗುಂಡಿನ‌ ದಾಳಿ ನಡೆಸಿ ಅಂದಾಜು ₹ 5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ:

 

 

 

ಮೈಸೂರು: ಹುಣಸೂರು ತಾಲೂಕಿನ ಚಿನ್ನಾಭರಣ ಮಳಿಗೆಗೆ ನುಗ್ಗಿದ ಡಕಾಯಿತರು ಮ್ಯಾನೇಜರ್​ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 4 ರಿಂದ 5 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್​ ಶಾಪ್​ಗೆ ಬೈಕ್‌ನಲ್ಲಿ ಬಂದ ಐವರು ಮುಸುಕುಧಾರಿಗಳು ದರೋಡೆ ಮಾಡಿದ್ದಾರೆ. ಚಿನ್ನದ ಮಳಿಗೆಯಲ್ಲಿ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಮ್ಯಾನೇಜರ್ ಪ್ರಾಣಾಪಾಯಯಿಂದ ಪಾರಾಗಿದ್ದಾರೆ. ಪರಾರಿಯಾಗುವ ವೇಳೆ ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಹೋಗಿದ್ದಾನೆ.

ವಿಷಯ ತಿಳಿದು ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸರು ದೌಡಾಯಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಂಡ ಪರಿಶೀಲನೆ ನಡೆಸುತ್ತಿದೆ. ಮಾಹಿತಿ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಎಎಸ್‌ಪಿ ಎಲ್. ನಾಗೇಶ್ ಸ್ಥಳಕ್ಕೆ ತೆರಳಿದ್ದಾರೆ. ಹಾಡುಹಗಲೇ ನಡೆದ ದರೋಡೆಯಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!