ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ " ವಿಷ ವರ್ತುಲ" ಬಿಡುಗಡೆ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ " ವಿಷ ವರ್ತುಲ" ಬಿಡುಗಡೆ

 

 

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಬರೆದ ಮೊದಲ ಪತ್ತೇದಾರಿ ಕಾದಂಬರಿ "ವಿಷ ವರ್ತುಲ" ವನ್ನು ಇಂದು ಡಿಸೆಂಬರ್ 7 ರಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಈ ಕಾದಂಬರಿಗೆ ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!