ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ:

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ:

 

 

 

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವನೀರು, ಶೌಚಾಲಯ, ರಂಗಮAದಿರ, ಬೋಧನಾಸಾಮಾಗ್ರಿಗಳ ವಿತರಣೆ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಇದಕ್ಕಾಗಿ ಈ ವರೆಗೆ 47.69 ಕೋಟಿ ರೂ. ವಿನಿಯೋಗಿಸಲಾಗಿದೆ. ಅವರು ಗುರುವಾರ ಧರ್ಮಸ್ಥಳದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಿಗೆ 1074 ಗೌರವ ಶಿಕ್ಷಕರನ್ನು ನೇಮಿಸಲಾಗಿದೆ. ರಾಜ್ಯದ 11,621 ಶಾಲೆಗಳಿಗೆ 75,518 ಜೊತೆ ಡೆಸ್ಕ್-ಬೆಂಚ್‌ಗಳನ್ನು ಈ ವರೆಗೆ ವಿತರಿಸಿದ್ದು ಇದಕ್ಕಾಗಿ 28.55 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಶ್ರದ್ಧಾಅಮಿತ್, ಅಮಿತ್, ಕುಮಾರಿ ಮಾನ್ಯ ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ‌ಮನೆ ಮಾಲಕ ಮೋಹನ್ ಕುಮಾರ್ ಉಜಿರೆ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಸವಿವರ ಮಾಹಿತಿ ನೀಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!