ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ, ಪ್ರಾಣಾಪಾಯದಿಂದ ಪಾರಾದ ಚಾಲಕ::

ಚಾರ್ಮಾಡಿ ಘಾಟಿಯಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ, ಪ್ರಾಣಾಪಾಯದಿಂದ ಪಾರಾದ ಚಾಲಕ::

 

 

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್‌ ಗಳಿಂದ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಉರುಳಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣ ಕೆಲಕಾಲ ಸಂಚಾರದಲ್ಲಿ ಅಡಚಣೆ ಉಂಟಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!