ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ತಿರುವು ಪಡೆದ ಬಾಲಕಿ ಅಪಹರಣ ಯತ್ನ ಪ್ರಕರಣ:

ಬೆಳ್ತಂಗಡಿ, ತಿರುವು ಪಡೆದ ಬಾಲಕಿ ಅಪಹರಣ ಯತ್ನ ಪ್ರಕರಣ:

 

 

ಬೆಳ್ತಂಗಡಿ: ತೀವ್ರ ಸಂಚಲನ ಮೂಡಿಸಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಬಳಿಯ ಸುದೆಮುಗೇರು ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಎಂದಿನಂತೆ ಸೋಮವಾರ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುತಿದ್ದ ವೇಳೆ ಒಮ್ನಿ ಕಾರಿನಲ್ಲಿ ಮೂವರು ಮುಸುಕುಧಾರಿಗಳು ಆಕೆಯನ್ನು ಅಡ್ಡಗಟ್ಟಿ ಕಾರಿನೊಳಗೆ ಎಳೆಯಲು ಪ್ರಯತ್ನಿಸಿದ್ದು ಈ ವೇಳೆ ದ್ವಿಚಕ್ರ ವಾಹನವೊಂದು ಬರುತ್ತಿರುವುದನ್ನು ಕಂಡ ಮುಸುಕುಧಾರಿಗಳು ಅವಳಿಗೆ ಮೂರು ಕಡೆ ಚೂರಿಯಿಂದ ಹಲ್ಲೆ ಗೈದು ಪರಾರಿಯಾಗಿದ್ದಾರೆ ಎಂಬ ದೂರು ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣದ ಗಂಭೀರತೆಯನ್ನು ಅರಿತ ಶಾಸಕ ಹರೀಶ್ ಪೂಂಜ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದರಲ್ಲದೇ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದ್ದರು. ಅದಾಗಲೇ ಬೆಳ್ತಂಗಡಿ ಪೊಲೀಸರು ಕಾರ್ಯಪ್ರವೃತ್ತರಾಗಿ ಎಲ್ಲೆಡೆ ಇರುವ ಸಿ.ಸಿ ಕ್ಯಾಮಾರಗಳು ಹಾಗೂ ವಾಹನಗಳನ್ನು ತಪಾಸಣೆಗೊಳಪಡಿಸಿದರು. ಅದರೆ ಇದೀಗ ಈ ಪ್ರಕರಣ ತಿರುವು ಪಡೆದುಕೊಂಡಿದ್ದು ಇದೊಂದು ಪೂರ್ವ ಯೋಚಿತ ಕೃತ್ಯ ಎಂಬ ವಿಚಾರ ವಿಚಾರಣೆ ವೇಳೆ ತಿಳಿದು ಬಂದಿದೆ. ವಿದ್ಯಾರ್ಥಿನಿಗೆ ಮಂಗಳೂರಿನ ಕಾಲೇಜಿಗೆ ತೆರಳಲು   ಮನಸ್ಸಿದ್ದು ಮನೆಯವರು   ಸ್ಥಳೀಯ ಕಾಲೇಜಿಗೆ ಸೇರಿಸಿರುವ  ಕಾರಣದಿಂದಾಗಿ ಈ ರೀತಿ ಮಾಡಿಕೊಂಡಿರುವ  ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!