ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ನೂತನ ಪ್ರೆಸ್ ಕ್ಲಬ್ ಟ್ರಸ್ಟ್ ಅಸ್ತಿತ್ವಕ್ಕೆ: ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಆಯ್ಕೆ:

ಬೆಳ್ತಂಗಡಿ ನೂತನ ಪ್ರೆಸ್ ಕ್ಲಬ್ ಟ್ರಸ್ಟ್ ಅಸ್ತಿತ್ವಕ್ಕೆ: ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಆಯ್ಕೆ:

 

 

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಬೆಳ್ತಂಗಡಿ ಪ್ರೆಸ್ ಕ್ಲಬ್ ಟ್ರಸ್ಟ್ ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿಬಿ ಧರ್ಮಸ್ಥಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ಪತ್ರಕರ್ತರ ಸಂಘದಲ್ಲಿ ಸಂಘದ ಅದ್ಯಕ್ಷ ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ‌ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಪುಷ್ಪರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ವರದಿಗಾರ ಶಿಬಿ ಧರ್ಮಸ್ಥಳ, ಕೊಶಾಧಿಕಾರಿಯಾಗಿ ಪ್ರಜಾವಾವಾಣಿ ಪತ್ರಿಕೆಯ ವರದಿಗಾರ ಗಣೇಶ್ ಶಿರ್ಲಾಲು ಹಾಗೂ ಉಪಾಧ್ಯಕ್ಷರಾಗಿ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸಂತೋಷ್ ಕೋಟ್ಯಾನ್, ಕಾರ್ಯದರ್ಶಿಯಾಗಿ ಪ್ರತಿನಿಧಿ ಪತ್ರಿಕೆಯ ವರದಿಗಾರ ಭುವನೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!