ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ: ₹1ಕೋಟಿ ಅನುದಾನ ಬಿಡುಗಡೆ ಶಾಸಕ ಹರೀಶ್ ಪೂಂಜ:

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ: ₹1ಕೋಟಿ ಅನುದಾನ ಬಿಡುಗಡೆ ಶಾಸಕ ಹರೀಶ್ ಪೂಂಜ:

 

 

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಬಗ್ಗೆ ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.

ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!