ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ,ಬೈಕ್ ಅಪಘಾತ , ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ:

ಉಜಿರೆ,ಬೈಕ್ ಅಪಘಾತ , ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ:

 

 

 

ಬೆಳ್ತಂಗಡಿ: ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿ ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಶನಿವಾರ ತಡ ರಾತ್ರಿ ಉಜಿರೆಯಲ್ಲಿ ನಡೆದಿದೆ. ಉಜಿರೆ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ರಾತ್ರಿ ಹಿಂದಿರುಗುತಿದ್ದ ವೇಳೆ ವಿದ್ಯಾರ್ಥಿಗಳು ಸಂಚರಿಸುತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿಗಳಿಬ್ಬರೂ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಓರ್ವನನ್ನು ಕೊಂಡುಹೋಗಲಾಗಿತ್ತು .ಅದರೆ ಅಲ್ಲಿ ಆತ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿ ಲಾಯಿಲ ಗ್ರಾಮದ ಚಂದ್ರಶೇಖರ ಎಂಬವರ ಪುತ್ರ ನಿತೇಶ್ (19) ಎಂದು ತಿಳಿದು ಬಂದಿದೆ. ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು ಉಜಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ .

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!