ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ ಸಾವು: ಸಾವಿನ ಬಗ್ಗೆ ಅನುಮಾನ ಹೊರಹಾಕಿದ ಕುಟುಂಬಸ್ಥರು:

ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ ಸಾವು: ಸಾವಿನ ಬಗ್ಗೆ ಅನುಮಾನ ಹೊರಹಾಕಿದ ಕುಟುಂಬಸ್ಥರು:

 

 

 

ಬೆಳ್ತಂಗಡಿ : ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಉದ್ಯಮಿ ಮಾ.17 ರಂದು ವಿಷ ಸೇವಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಚಿಕಿತ್ಸೆ ಫಲಿಸದೆ ಮಾ.29 ರಂದು ಬೆಳಗ್ಗೆ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿ ಅಜ್ಜನ ಮನೆಯಲ್ಲಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36) ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೋಂದಣಿ ಮಾಡಿಸಿಕೊಂಡಿದ್ದರು ಎನ್ನಲಾಗಿದೆ.

ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಇನ್ ವರ್ಟರ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಶಯ ಹೊರಹಾಕಿದ ಪೋಷಕರು: ಸುದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ ಮೂಡುತಿದ್ದು, ಸರಿಯಾದ ರೀತಿಯಲ್ಲಿ ತನಿಖೆ ನಡೆಸುವಂತೆ ಕುಟುಂಬಸ್ಥರು ಪೊಲೀಸರಿಗೆ ಮನವಿಯನ್ನು ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!