ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದಾಸವಾಳ ಹೂವಿನ ದಿಂಡು ಶ್ವಾಸಕೋಶದಲ್ಲಿ ಸಿಲುಕಿ ಮಗು ಸಾವು:

ದಾಸವಾಳ ಹೂವಿನ ದಿಂಡು ಶ್ವಾಸಕೋಶದಲ್ಲಿ ಸಿಲುಕಿ ಮಗು ಸಾವು:

 

 

 

ಮೈಸೂರು: ಮಗುವೊಂದು  ಹೂವಿನ ದಿಂಡಿನ ಭಾಗವನ್ನು ನುಂಗಿದ ಪರಿಣಾಮ ಉಸಿರಾಟದ ಸಮಸ್ಯೆಯಿಂದ  ಮೃತಪಟ್ಟಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.

ಹನಗೋಡು ಹೋಬಳಿಯ ದೊಡ್ಡ ಹೆಜ್ಜೂರಿನ ಸುದರ್ಶನ್ ಹಾಗೂ ನವ್ಯ ದಂಪತಿಯ ಎರಡನೇ ಪುತ್ರ ಆರೂವರೇ ವರ್ಷದ  ಚಿನ್ಮಯ್ ಗೌಡ ಮೃತಪಟ್ಟಿರುವ ಮಗು. ಮನೆಯ ಹೊಸ್ತಿಲಲ್ಲಿ ಇಟ್ಟಿದ್ದ ದಾಸವಾಳ ಹೂವಿನ ದಿಂಡು ‌ನುಂಗಿದ ಪರಿಣಾಮ, ಶ್ವಾಸಕೋಶದಲ್ಲಿ ಸಿಲುಕಿ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಮನೆಯ  ಬಾಗಿಲಿನ ಹೊಸ್ತಿಲಿಗೆ ಪೂಜೆ ಮಾಡಿ ದಾಸವಾಳದ ಹೂವುಗಳನ್ನು ಇಡಲಾಗಿತ್ತು. ಈ ವೇಳೆ ಮಗು ಚಿನ್ಮಯ್ ತನ್ನ ಅಣ್ಣನ ಜೊತೆ ಆಟವಾಡುತ್ತಿದ್ದ. ಪೂಜೆಗಾಗಿ ಇಟ್ಟಿದ್ದ ದಾಸವಾಳ ಹೂವಿನ ಹಸಿರು ದಿಂಡಿನ ಭಾಗವನ್ನು ಕಿತ್ತು ಬಾಯಿಗೆ ಹಾಕಿಕೊಂಡಿದ್ದ ಚಿನ್ಮಯ್, ಇದನ್ನು ಗಮನಿಸಿದ ಮಗುವಿನ ಅಣ್ಣ ಹೂ ಹೊರತೆಗೆಯಲು ಪ್ರಯತ್ನಿಸಿದ್ದನಾದರೂ, ಅಷ್ಟರಲ್ಲೇ ಮಗು ಆ ದಿಂಡನ್ನು ನುಂಗಿದೆ.

ಮಗು ನುಂಗಿದ ಹೂವಿನ ಭಾಗವು ನೇರವಾಗಿ ಶ್ವಾಸಕೋಶಕ್ಕೆ ಹೋಗಿ ಸಿಲುಕಿಕೊಂಡಿದೆ. ಇದರಿಂದಾಗಿ ಮಗುವಿಗೆ ತೀವ್ರವಾದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಗಾಬರಿಗೊಂಡ ಪೋಷಕರು ಮಗುವನ್ನು ಹನಗೋಡಿನ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!