ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ಡಾ.ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ : ಪ್ರಧಾನ ಭಾಷಣಕಾರರ ಹೆಸರಿನ ಗೊಂದಲ, 3 ಆಮಂತ್ರಣ ಪತ್ರ ಬದಲಾವಣೆ:

ಬೆಳ್ತಂಗಡಿ, ಡಾ.ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ : ಪ್ರಧಾನ ಭಾಷಣಕಾರರ ಹೆಸರಿನ ಗೊಂದಲ, 3 ಆಮಂತ್ರಣ ಪತ್ರ ಬದಲಾವಣೆ:

 

 

ಬೆಳ್ತಂಗಡಿ: ತಾಲೂಕು ಆಡಳಿತ ,ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತರತ್ನ , ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಮುಖ್ಯ ಭಾಷಣಕಾರರ ಹೆಸರು ಪದೇಪದೆ ಬದಲಾವಣೆಗೊಂಡು ಗೊಂದಲಕ್ಕೀಡಾಗಿತ್ತು.

 

 

 

 

ದಲಿತ ನಾಯಕರ ಸಭೆಯಲ್ಲಿ ಸಾಹಿತಿ ಆತ್ರಾಡಿ ಅಮೃತ ಶೆಟ್ಟಿಯವರನ್ನು  ಪ್ರಧಾನ ಭಾಷಣಕಾರನ್ನಾಗಿ ಹೆಸರು ಸೂಚಿಸಲಾಗಿತ್ತು. ಆದರೆ ತಾಲೂಕು ಆಡಳಿತ ಮುದ್ರಿಸಿದ ಆಮಂತ್ರಣದಲ್ಲಿ ಸುನೀಲ್ ಪಂಡಿತ್ ಹೆಸರಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದಾಗ ಮತ್ತೆ ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡೆಪ್ಪ ದೊಡಮನಿ ಹೆಸರು ಹಾಕಲಾಯಿತು. ಕೊನೆಗೆ ಅದೂ ಬದಲಾವಣೆಯಾಗಿ ಶಿವಪ್ರಸಾದ್ ಸುರ್ಯ ಮುಖ್ಯ ಭಾಷಣಕಾರರಾದರು. ಬರೋಬ್ಬರಿ 3 ಸಲ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿದೆ.ರಾಜಕೀಯ ಒತ್ತಡದಲ್ಲಿ ಹೆಸರು ಬದಲಾವಣೆಗಳಾಗಿದೆಯೇ ಅಥವಾ ಅಧಿಕಾರಿಗಳು ಈ ರೀತಿ ಮಾಡಿದ್ದಾರೆಯೇ ತಿಳಿದು ಬರಬೇಕಾಗಿದೆ.

ಈ ಎಲ್ಲ ಗೊಂದಲಗಳ ನಡುವೆ ಎ14 ರಂದು ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ  ನಡೆಯಿತು. ಕಾರ್ಯಕ್ರಮದಲ್ಲಿ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಧನುಶ್ರೀ ಎಸ್. ಕುಲಾಲ್ ಅಂಬೇಡ್ಕರ್ ರವರ ಕುರಿತು ಮಾಡಿದ ಭಾಷಣ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.ಸಭೆಯಲ್ಲಿ ವಿ.ಪ.ಶಾಸಕ ಪ್ರತಾಪ್ ಸಿಂಹ ನಾಯಕ್, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ಎನ್.ಎಸ್. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ . ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!