ಎ. 15 ರಂದು ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ ಡಾ| ಸ್ಮಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ದೇರಳಕಟ್ಟೆಯ ಕೆ.ಎಸ್. ಹೆಗ್ಡೆ, ಮೆಡಿಕಲ್ ಅಕಾಡೆಮಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಕರುಣಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ, ಮಂಗಳೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜಾ ಹಾಗೂ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ,
ಎ. 16 ರಂದು ನಡೆಯಲಿರುವ ಸಮಾರೋಪ ಸಮಾರಂಭ ವಂ। ಡಾ| ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ| ಜೋಸೆಫ್ ಎನ್.ಎಂ. ಇತರ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 1982ರಲ್ಲಿ ಸ್ಥಾಪನೆಯಾದ ಸೇಕ್ರೆಡ್ ಹಾರ್ಟ್ ಕಾಲೇಜು ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇತ್ತೀಚೆಗೆ ನಡೆದ 2024-25ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದ ಸಮಗ್ರ ಚಾಂಪಿಯನ್ ಶಿಪ್, ತೃತೀಯ ಸ್ಥಾನವನ್ನು ಕಾಲೇಜು ಪಡೆದುಕೊಂಡಿದೆ ಎಂದು ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕಾರ್ಯಕ್ರಮದ ಸಂಚಾಲಕ ಡಾ| ಪ್ರಕಾಶ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ| ಈಶ್ವರ ಗೌಡ ಪಿ., ಕನ್ನಡ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಉಪಸ್ಥಿತರಿದ್ದರು.