ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

 

 

 

ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ವ್ಯಕ್ತಿಯೊಬ್ಬರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಆಗಮಿಸಿ ಬೆಂಕಿಯನ್ನು ನಂದಿಸಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳ ಪೊಲೀಸರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಆಗಮಿಸಿ ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ವಿಚಾರಿಸಿದಾಗ ತಾನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಎಂಬುವುದಾಗಿ ತಿಳಿಸಿದ್ದು. ನಾನು ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳದ ನೇತ್ರಾವತಿ ಬಳಿಗೆ ಆಗಮಿಸಿ ಪೆಟ್ರೋಲ್ ತಾನೆ ತಂದು ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ.

ಈ ಘಟನಾ ವಿಚಾರವನ್ನು ಧರ್ಮಸ್ಥಳ ಪೊಲೀಸರು ನರೇಂದ್ರ ಮನೆಯವರು ಮಾಹಿತಿ ನೀಡಿದ್ದು ಅವರು ಬಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!