ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಧರ್ಮಸ್ಥಳ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಧರ್ಮಸ್ಥಳ ಭೇಟಿ

 

ಧರ್ಮಸ್ಥಳ :ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು.

ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್, ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!