ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮೊದಲ ಸಚಿವ ಸಂಪುಟ ಸಭೆಯಲ್ಲಿ 6 ಮಹತ್ವದ ನಿರ್ಣಯ ಕೈಗೊಂಡ ಸಿಎಂ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ನೂತನ ಮುಖ್ಯ ಮಂತ್ರಿ ಡಿ.ಕೆ.ಶಿ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಮೊದಲ ಸಚಿವ ಸಂಪುಟ ಸಭೆಯಲ್ಲಿ 6 ಮಹತ್ವದ ನಿರ್ಣಯ ಕೈಗೊಂಡ ಸಿಎಂ: 10,000 ಭಾರತ ಜೋಡೋ ಯುವಕರ ಸಂಘ ರಚನೆ:

ಮೊದಲ ಸಚಿವ ಸಂಪುಟ ಸಭೆಯಲ್ಲಿ 6 ಮಹತ್ವದ ನಿರ್ಣಯ ಕೈಗೊಂಡ ಸಿಎಂ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ನೂತನ ಮುಖ್ಯ ಮಂತ್ರಿ ಡಿ.ಕೆ.ಶಿ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಮೊದಲ ಸಚಿವ ಸಂಪುಟ ಸಭೆಯಲ್ಲಿ 6 ಮಹತ್ವದ ನಿರ್ಣಯ ಕೈಗೊಂಡ ಸಿಎಂ: 10,000 ಭಾರತ ಜೋಡೋ ಯುವಕರ ಸಂಘ ರಚನೆ:

 

 

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಜನರಿಗೆ ಆರು ಜನಪ್ರಿಯ ತೀರ್ಮಾನಗಳನ್ನು ಮಾಡಿ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ತಮ್ಮ ನೂತನ 13 ಸಚಿವ ಸಂಪುಟ ಸದಸ್ಯರ ಜೊತೆ ಮೊದಲ ಸಭೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್ ಆರು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ರಾಜ್ಯದ ಯುವ ಜನಾಂಗಕ್ಕೆ, ಬೆಂಗಳೂರಿಗೆ, ಒಸಿ ಸಿಗದ ನಿವೇಶನದಾರರಿಗೆ, ವಿದ್ಯಾರ್ಥಿಗಳಿಗೆ, ಉದ್ಯೋಗಾಂಕ್ಷಿಗಳಿಗೆ ಸಂಬಂಧಿಸಿದಂತೆ ಆರು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್:

ವಿದ್ಯಾರ್ಥಿಗಳು ಬಸ್ ಪಾಸ್ ಬಗ್ಗೆ ಮಾತನಾಡುತ್ತಿದ್ದರು. ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಉಚಿತ ಬಸ್ ನೀಡಿದ್ದೀರ. ನಮಗೂ ಉಚಿತ ಬಸ್ ಪ್ರಯಾಣ ಕಲ್ಪಸುವಂತೆ ಒತ್ತಾಯಿಸುತ್ತಿದ್ದರು. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ, ಕಾಲೇಜು, ಪಿಜಿ, ಪಿಯುಸಿ, ಎಸ್ಎಸ್ ಎಲ್ ಸಿ ಸೇರಿ ಸರ್ಕಾರಿ, ಖಾಸಗಿ ಒಳಗೊಂಡಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡಲು ತೀರ್ಮಾನಿಸಲಾಗಿದೆ. ಉಚಿತ ಬಸ್ ಪಾಸ್​​ಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು. ಇದಕ್ಕಾಗಿ ವಾರ್ಷಿಕ 250 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಸಿಎಂ ಮಾಹಿತಿ ನೀಡಿದರು.

10,000 ಭಾರತ ಜೋಡೋ ಯುವಕರ ಸಂಘ:

ರಾಜ್ಯದಲ್ಲಿ 10,000 ಭಾರತ ಜೋಡೋ ಯುವಕರ ಸಂಘ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಸಿಎಂ ತಿಳಿಸಿದರು. ಪ್ರತಿ ಪಂಚಾಯತ್ ನಲ್ಲಿ 150 ಯುವಕರ ಸಂಘ ಮಾಡಲು ತೀರ್ಮಾನ ಮಾಡಲಾಗಿದೆ. ಪ್ರತಿ ಸಂಘಕ್ಕೆ ಸರ್ಕಾರ 10 ಲಕ್ಷ ರೂ. ಅನುದಾನ ಕೊಡಲಿದೆ. ಕ್ರೀಡಾ ಮನೋಭಾವ, ಸಾಂಸ್ಕೃತಿಕ ಕಾರ್ಯಕ್ರಮ, ಸಾಮಾಜಿಕ ಸಾಮರಸ್ಯ, ಆಟ ಪಾಠದಲ್ಲಿ ತೊಡಗಿಸಿಕೊಳ್ಳಲು, ಅವರಲ್ಲಿ ನಾಯಕತ್ವ ಬೆಳೆಸಲು, ಪ್ರತಿಭೆ ಗುರುತಿಸುವ ಉದ್ದೇಶದಿಂದ 10,000 ಭಾರತ ಜೋಡೋ ಯುವಕರ ಸಂಘ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2500 ಚದರ ಅಡಿ ನಿವೇಶನದಾರರಿಗೆ ಒಸಿಯಿಂದ ವಿನಾಯಿತಿ:

ಮತ್ತೊಂದು ಮಹತ್ವದ ಘೋಷಣೆ ಮಾಡಿರುವ ಸಿಎಂ ಡಿಕೆಶಿ, ಸದ್ಯ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ 1200 ಚದರ ಅಡಿ ನಿವೇಶನಗಳಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಒಸಿ, ಸಿಸಿ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಇದೀಗ ಅದನ್ನು 2500 ಚದರ ಅಡಿವರೆಗೆ ವಿಸ್ತರಿಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದರು. 20% ಆಸು ಪಾಸು ನಿಯಮ‌ ಉಲ್ಲಂಘಿಸಿದವರಿಗೆ ಏಕ ಕಾಲಕ್ಕೆ ಅನ್ವಯವಾಗುವಂತೆ ಒಸಿ, ಸಿಸಿ ಪಡೆಯುವುದರಿಂದ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ರಾಜ್ಯಾದ್ಯಂತ ಬಿ ನಿಂದ ಎ ಖಾತಾ ಯೋಜನೆ:

ಐದನೇ ಮಹತ್ವದ ಘೋಷಣೆ ಮಾಡಿರುವ ಸಿಎಂ ಡಿಕೆಶಿ, ಬಿ ನಿಂದ ಎ ಖಾತಾ ಮಾಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ತೀರ್ಮಾನವಾಗಿದೆ. ಇನ್ನು ಈ ಯೋಜನೆಯನ್ನು ನಗರ, ಗ್ರಾಮೀಣ ಪ್ರದೇಶದಲ್ಲಿನ ನಿವೇಶನಗಳಿಗೆ ವಿಸ್ತರಿಸಲು ತೀರ್ಮಾನ ಮಾಡಲಾಗಿದೆ ಎಂದು ಇದೇ ವೇಳೆ ಘೋಷಿಸಿದರು.

ಖಾಸಗಿ EMPLOYMENT EXCHANGE ಕೇಂದ್ರ ರಚನೆ:

ನಮ್ಮದು ಶಕ್ತಿಶೀಲ ರಾಜ್ಯವಾಗಿದೆ. ಇಡೀ ದೇಶದಲ್ಲಿ ರಾಜ್ಯದ ಮಾನವ ಸಂಪನ್ಮೂಲ ಉತ್ತಮವಾಗಿದೆ.‌ ಯುವ ಜನಾಂಗ ಖಾಸಗಿಯಲ್ಲಿ ಉದ್ಯೋಗ ಹುಡುಕುತ್ತಾರೆ. ಅವರಿಗಾಗಿ ಈ ಹಿಂದಿದ್ದ EMPLOYMENT EXCHANGE ಮಾದರಿಯಲ್ಲಿ ಖಾಸಗಿ ಉದ್ಯೋಗ ಎಕ್ಸ್ ಚೇಂಜ್ ಕೇಂದ್ರ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ರಸ್ತೆ ಅಭಿವೃದ್ಧಿಗೆ  2000 ಕೋಟಿ ರೂ.:

ಸಚಿವ ಸಂಪುಟದಲ್ಲಿ ಆರನೇಯ ಮಹತ್ವದ ತೀರ್ಮಾನವಾಗಿ ಬೆಂಗಳೂರಿನ ರಸ್ತೆಗಳ ಡಾಂಬರೀಕರಣಕ್ಕಾಗಿ 2000 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಜಿಬಿಎ ವ್ಯಾಪ್ತಿ ಸೇರಿ ಬೆಂಗಳೂರು ನಗರದ ರಸ್ತೆ ಸಮಸ್ಯೆಗಳನ್ನು ನಿವಾರಿಸಲು 2,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದರು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!