ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮುಂಗಾರು ಮತ್ತಷ್ಟು ಚುರುಕು, ಭಾರೀ ಗಾಳಿ ಮಳೆ ನಿರೀಕ್ಷೆ, ದ.ಕ.ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ:

ಮುಂಗಾರು ಮತ್ತಷ್ಟು ಚುರುಕು, ಭಾರೀ ಗಾಳಿ ಮಳೆ ನಿರೀಕ್ಷೆ, ದ.ಕ.ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ:

 

 

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಮುಂದಿನ ಕೆಲವು ದಿನಗಳು ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ತೀವ್ರ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಆ ಜಿಲ್ಲೆಗಳಿಗೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ಮತ್ತು ಉತ್ತರ ಒಳನಾಡಿನ ಬೆಳಗಾವಿ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೂ ಎಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಅಥವಾ ಹಗುರವಾದ ಮಳೆಯ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!