ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

 

 

 

ಬೆಳ್ತಂಗಡಿ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾ ಸಂಘದ ವತಿಯಿಂದ ಹತ್ತು ದಿನಗಳ ಯೋಗ ಶಿಬಿರಕ್ಕೆ ಚಾಲನೆ ನೀಡಿದ್ದು, ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಯೋಗ ವಿಭಾಗದ ಸಹಾಯಕಿಯರಾದ ವೀಕ್ಷಣಾ ಹಾಗೂ ವರ್ಷಿಣಿ ಎಂ. ಅವರು ಯೋಗದ ಮಹತ್ವ ಮತ್ತು ಅದರ ಆರೋಗ್ಯಕರ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ.ಆರ್. ವಹಿಸಿದ್ದರು. ಈ ಸಂದರ್ಭದಲ್ಲಿ ಯೋಗ ತರಬೇತುದಾರರಾಗಿರುವ ಉಜಿರೆ ಬಿ.ಎನ್.ವೈ.ಎಸ್. ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯರಾದ ವೀಕ್ಷಣಾ ಹಾಗೂ ವರ್ಷಿಣಿ ಎಂ. ಅವರು ಮಕ್ಕಳಿಗೆ ಯೋಗಾಭ್ಯಾಸದ ಅಗತ್ಯತೆ, ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಯೋಗದ ಪಾತ್ರ ಹಾಗೂ ಅದರ ಮಹತ್ವದ ಬಗ್ಗೆ ವಿವರಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಎನ್. ಅವರು ಶಿಬಿರವನ್ನು ಆಯೋಜಿಸಿದ್ದರು. ಹತ್ತು ದಿನಗಳ ಈ ಯೋಗ ಶಿಬಿರದಲ್ಲಿ ಸುಮಾರು 150 ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದಾರೆ. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೇಯಾಂಸ ಜೈನ್ ಅವರು ನಿರೂಪಿಸಿದರು. ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!