ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಡಿ.ಕೆ.ಶಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಬಿಕ್ಕಟ್ಟು : ಸಚಿವ ಸ್ಥಾನಕ್ಕೆ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ:

ಡಿ.ಕೆ.ಶಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಬಿಕ್ಕಟ್ಟು : ಸಚಿವ ಸ್ಥಾನಕ್ಕೆ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ:

 

 

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ‌ ಸಚಿವ ಸಂಪುಟದಲ್ಲಿ ಬಿಕ್ಕಟ್ಟು ತಲೆದೋರಿದೆ. ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದಾರೆ. ಈ ಖಾತೆ ಬದಲಿ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ಅವರು ಅಸಮಾಧಾನಗೊಂಡಿದ್ದಾರೆ. ತಮಗೆ ಈ ಖಾತೆ ಬೇಡ ಎಂದಿರುವ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಗುರುವಾರ ರಾತ್ರಿ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದು, ಜಲಸಂಪನ್ಮೂಲ ಇಲಾಖೆಯನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ಧಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳಿಸಿಕೊಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಜಲಸಂಪನ್ಮೂಲ ಖಾತೆ ಒಪ್ಪಿಕೊಂಡು ಆತ್ಮಸಾಕ್ಷಿಗೆ ವಿರುದ್ದವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆ ಕಾರಣದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ. ಶಾಸಕ ಹಾಗೂ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯೇ ಬೇಕು ಎಂದು ಒತ್ತಾಯಿಸಿದ್ದರು. ಜಲಸಂಪನ್ಮೂಲ ಖಾತೆ ನೀಡಿದರೆ ಅದನ್ನು ನಿಭಾಯಿಸುವುದು, ಪ್ರವಾಸ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ, ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು. ಈ ಖಾತೆ ಕೊಡುವುದಾಗಿ 2023ರಲ್ಲೇ ಡಿಕೆಶಿ ಭರವಸೆ ನೀಡಿದ್ದರು. ಅದರಂತೆ ಇದೇ ಖಾತೆಯೇ ನೀಡಬೇಕು. ಇಲ್ಲವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸ್ಪಷ್ಟ ನಿಲುವು ತಿಳಿಸಿದ್ದರು. ಅದರಂತೆ ಅವರು ಇಂದು ರಾಜೀನಾಮೆ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!